ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಮೂವರು ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ- ಮೂವರು ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಫಾರ್ಮ್ ಹೌಸ್‍ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಪೊಲಿಸರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಗೋಕರ್ಣ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಫಾರ್ಮ್ ಹೌಸ್ ನಡೆಸುತ್ತಿದ್ದ ಗೋಕರ್ಣದ ಸಚಿನ್ ಆಚಾರಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ರಫೀಕ್, ಹರ್ಷಿದಾ ಬಾನು ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಬೆಂಗಳೂರು, ಚಿತ್ರದುರ್ಗದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!