ಪಾದಚಾರಿಗೆ ಬೈಕ್‌ ಢಿಕ್ಕಿ; ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಪಾದಚಾರಿಗೆ ಬೈಕ್‌ ಢಿಕ್ಕಿ; ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಪಾದಚಾರಿಗೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು, ಪಾದಚಾರಿ ಗಂಭೀರ ಗಾಯಗೊಂಡಿರುವ ಘಟನೆ ಮುಕ್ಕ ರಾಷ್ಟ್ರೀಯ ಹೆದ್ದಾರಿ 66ರ ಪಡ್ರೆ ದ್ವಾರದ ಬಳಿ ಇಂದು ಮಧ್ಯಾಹ್ನ ನಡೆದಿದೆ‌.

ಮುಕ್ಕ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿ, ಹೊಸಬೆಟ್ಟು ನಿವಾಸಿ ವೈಭವ್‌ ವಿಶ್ವನಾಥ್ ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಮುಕ್ಕ ಜುಮಾ ಮಸೀದಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಸಿ. ಫಾರೂಕ್ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನದ ವೇಳೆ ವೈಭವ್‌ ವಿಶ್ವನಾಥ್ ಮುಕ್ಕದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಫಾರೂಕ್‌ ಅವರು ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ನಲ್ಲಿ ಬರುತ್ತಿದ್ದ ವೈಭವ್ ಢಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!