ಮತ್ತೆ ನೈತಿಕ ಪೊಲೀಸ್ ಗಿರಿ: ಭಿನ್ನ ಕೋಮಿನ ಜೋಡಿಗೆ ತರಾಟೆ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ಮರುಕಳಿಸಿದೆ. ಮಂಗಳೂರು ಮಂಕಿ ಸ್ಟ್ಯಾಂಡ್ ಬಳಿಯ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಇದನ್ನ ನೋಡಿದ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ.
ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

















Leave a Reply