ಶಿರಾಡಿ ಘಾಟ್ ನಲ್ಲಿ ಅಪಘಾತ; ಮಿನಿಲಾರಿಗೆ ಡಿಕ್ಕಿಯಾಗಿ ಪರಾರಿಯಾದ ಘನ ವಾಹನ – ಇಬ್ಬರು ಸ್ಥಳದಲ್ಲೇ ಮೃತ್ಯು

ಶಿರಾಡಿ ಘಾಟ್ ನಲ್ಲಿ ಅಪಘಾತ; ಮಿನಿಲಾರಿಗೆ ಡಿಕ್ಕಿಯಾಗಿ ಪರಾರಿಯಾದ ಘನ ವಾಹನ – ಇಬ್ಬರು ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ ಕೆಂಪು ಹೊಳೆ ಸಮೀಪ ಮಿನಿ ಲಾರಿಯೊಂದಕ್ಕೆ ಯಾವುದೋ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ಮುಂಜಾನೆ 3 ಗಂಟೆ ವೇಳೆಗೆ ನಡೆದಿದೆ ಎಂದು ವರದಿಯಾಗಿದೆ.

ಮೃತಪಟ್ಟವರು ಹಾಸನ ನಿವಾಸಿಗಳು ಎಂದು ತಿಳಿದುಬಂದಿದೆ. ಮಿನಿ ಲಾರಿ ಹಾಸನದಿಂದ ಮಂಗಳೂರಿಗೆ ಬರುತ್ತಿತ್ತು. ಶಿರಾಡಿ ಘಾಟ್ ನ ಕೆಂಪು ಹೊಳೆ ಸಮೀಪ ಮಿನಿ ಲಾರಿಗೆ ಯಾವುದೋ ಘನ ವಾಹನ ಡಿಕ್ಕಿಯಾಗಿ ಪರಾರಿಯಾಗಿದೆ. ಘಟನೆಯಲ್ಲಿ ಮಿನಿ ಲಾರಿ ಸಂಪೂರ್ಣ ಜಖಂ ಗೊಂಡಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಘಟನಾ ಸ್ಥಳಕ್ಕೆ ಸಕಲೇಶಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!