ನೆಲ್ಯಾಡಿ: ಕಾರು-ಬೈಕ್ ಡಿಕ್ಕಿ, ಗಂಭೀರ ಗಾಯಗೊಂಡ ಬೈಕ್ ಸವಾರ

ನೆಲ್ಯಾಡಿ: ಕಾರು-ಬೈಕ್ ಡಿಕ್ಕಿ, ಗಂಭೀರ ಗಾಯಗೊಂಡ ಬೈಕ್ ಸವಾರ

ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಚರ್ಚ್ ಬಳಿ ಕಾರು ಹಾಗೂ ಬೈಕು ಗಳ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ತಲೆಗೆ, ಕೈಗೆ, ಕಾಲಿಗೆ ತೀವ್ರ ಸ್ವರೂಪದ ಗಾಯ ಘಟನೆ ಡಿ.18ರಂದು ಮದ್ಯಾಹ್ನ 12.30 ಗಂಟೆಗೆ ನಡೆದಿದೆ.

ಕಡಬ ತಾಲೂಕು ಬಲ್ಯ ಗ್ರಾಮದ ಕಂಚಿನಡ್ಕ ಮನೆಯ ಬೈಕ್ ಸವಾರ ಆನಂದ ಶೆಟ್ಟಿ ಎಂದು ಗುರುತಿಸಲಾಗಿದೆ

ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಕಾರು ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಮೇತ ರಸ್ತೆಗೆ ಸವಾರ ಎಸೆಯಲ್ಪಟ್ಟ ಪರಿಣಾಮ ಅವರ ತಲೆಗೆ, ಕೈಗೆ, ಕಾಲಿಗೆ ತೀವ್ರ ಸ್ವರೂಪದ ಗಾಯವುಂಟಾಗಿದ್ದು, ಅಪಘಾತ ಪಡಿಸಿದ ಕಾರನ್ನು ಚಾಲಕ ಅಪಘಾತಪಡಿಸಿದ ಸ್ಥಳದಲ್ಲಿ ನಿಲ್ಲಿಸದೇ ಚಲಾಯಿಸಿಕೊಂಡು ಹೋಗಿರುವುದಾಗಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಆನಂದ ಶೆಟ್ಟಿ ಅವರು ಮಂಗಳೂರಿನ ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು.

ಅಪಘಾತದಲ್ಲಿ ಎರಡು ವಾಹನಗಳು ಜಖಂಗೊಂಡಿದೆ. ಘಟನ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು.

ಕಾರು ಚಾಲಕನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

Previous post

ಉಪ್ಪಿನಕಾಯಿ ಕೇಳೋಕೆ ಬಂದು ಅತ್ಯಾಚಾರಕ್ಕೆ ಯತ್ನಿಸಿ, ಕೆನ್ನೆ ಕಚ್ಚಿದ: ಮಹಿಳೆ ಚೀರಾಡ್ತಿದ್ದಂತೆ ಪರಾರಿ!

Next post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ” ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ “

Leave a Reply

You May Have Missed

error: Content is protected !!