ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೆಂಜರ್ಸ್ ವಿಭಾಗದ ವತಿಯಿಂದ ‘ವಿವೇಕಾನಂದ ಜಯಂತಿ’ಯನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಸದಸ್ಯರಾದ ಶ್ರೀ ನಾರಾಯಣ ಫಡ್ಕೆ ಇವರು ವಿದ್ಯಾರ್ಥಿಗಳಿಗೆ ಯುವ ದಿನದ ಸಂದೇಶವನ್ನು ನೀಡಿ, ‘ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಅಜರಾಮರರು, ಇವರು ಸತ್ಯ, ಧರ್ಮ, ನ್ಯಾಯಕ್ಕಾಗಿ ಜೀವನವನ್ನು ಮುಡಿಪಾಗಿಟ್ಟವರು, ಇವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಪುರುಷ ಸಿಂಹರಾಗಿ, ಬಲಿಷ್ಠ ಭಾರತದ ನಿರ್ಮಾಣ ಮಾಡಬೇಕು’ ಎಂದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಸ್ವಯಂಸೇವಕಿ ಕುಮಾರಿ ಪುಣ್ಯಶ್ರೀ ಧನ್ಯವಾದಗೈದರು.

Leave a Reply

You May Have Missed

error: Content is protected !!