ಹಠಾತ್ ಬ್ರೇಕ್ ಹಾಕಿದ ಚಾಲಕ, ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಮಹಿಳೆ ಸಾವು

ಹಠಾತ್ ಬ್ರೇಕ್ ಹಾಕಿದ ಚಾಲಕ, ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಮಹಿಳೆ ಸಾವು

ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಪ್ರಯಾಣಿಕ ಮಹಿಳೆ ಹೊರಕ್ಕೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಜೋಕಟ್ಟೆ ಕ್ರಾಸ್ ಬಳಿ ನಡೆದಿದೆ.

ಮೃತ ಮಹಿಳೆಯನ್ನು 65 ವರ್ಷದ ಈರಮ್ಮ ಎಂದು ಗುರುತಿಸಲಾಗಿದೆ. ಅವರು ತನ್ನ ಮಗಳೊಂದಿಗೆ ಖಾಸಗಿ ಬಸ್ಸಿನಲ್ಲಿ ಸುರತ್ಕಲ್ ಕಡೆಗೆ ಪ್ರಯಾಣಿಸುತ್ತಿದ್ದರು.

ಬೆಳಿಗ್ಗೆ 10:10 ರ ಸುಮಾರಿಗೆ ಬಸ್ಸು ಜೋಕಟ್ಟೆ ಕ್ರಾಸ್ ಬಳಿಯ ಸರ್ವೀಸ್ ಸ್ಟೇಷನ್ ತಲುಪಿದಾಗ, ಅದರ ಚಾಲಕ ಹಠಾತ್ ಮತ್ತು ದುಡುಕಿನ ಬ್ರೇಕ್ ಹಾಕಿದ ಪರಿಣಾಮ ಚಾಲಕನ ಪಕ್ಕದ ಮುಂದಿನ ಸೀಟಿನಲ್ಲಿ ಕುಳಿತಿದ್ದ ಈರಮ್ಮ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ. ಅಲ್ಲದೆ, ಬಸ್‌ ನ ಹಿಂಭಾಗದ ಎಡ ಚಕ್ರವು ಈರಮ್ಮ ಅವರ ಮೇಲೆ ಚಲಿಸಿದ ಪರಿಣಾಮವಾಗಿ ತಲೆಗೆ ಗಂಭೀರ ಗಾಯವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Leave a Reply

You May Have Missed

error: Content is protected !!