ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ವಿನುತಾ.ಆರ್.ನಾಯ್ಕ್ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದ್ದು ಬೆಂಗಳೂರಿನಲ್ಲಿ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಇವರು ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಶೈಕ್ಷಣಿಕವಾಗಿ ಮಾತ್ರವಲ್ಲದೆ ಯಕ್ಷಗಾನ, ನೃತ್ಯ, ನಾಟಕ, ಏಕಪಾತ್ರಾಭಿನಾಯ ಇತ್ಯಾದಿಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾಳೆ.



















Leave a Reply