ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀಮತಿ ವಿನಂತಿನಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗಣರಾಜ್ಯೋತ್ಸವ ಆಚರಣೆಯ ಹಿನ್ನೆಲೆ, ಮಹತ್ವ ಹಾಗೂ ಭಾರತದ ಸಂವಿಧಾನ ರಚನೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆಯ ಬಗ್ಗೆ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಶೇಟ್ ಮಾಹಿತಿ ನೀಡಿದರು.

ಶಾಲೆಯ ಅಧ್ಯಾಪಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!