ಎರಡು ರಿಕ್ಷಾ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಾಯ

ಎರಡು ರಿಕ್ಷಾ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಾಯ

ರಿಕ್ಷಾಗಳ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ವಿಟ್ಲ-ಅಡ್ಯನಡ್ಕ ರಸ್ತೆಯ ಪಡಿಬಾಗಿಲು ಎಂಬಲ್ಲಿ ಸಂಭವಿಸಿದೆ.

ಎರುಂಬು ನಿವಾಸಿ ಹಮೀದ್ ಎರುಂಬು, ಪಡಿಬಾಗಿಲು ನಿವಾಸಿ ರವಿ ಪಡಿಬಾಗಿಲು ಅವರ ರಿಕ್ಷಾಗಳಾಗಿವೆ. ನೇರ ರಸ್ತೆಯಲ್ಲಿ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಒಂದು ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ಅಳಿಕೆ ಗ್ರಾಮದ ಮಡಿಯಾಲ ನಿವಾಸಿ ಅಮ್ಮು ಮೂಲ್ಯ(69) ಅವರು ಮೃತಪಟ್ಟಿದ್ದಾರೆ.

ಗಾಯಗೊಂಡವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೇರೆ ಕಡೆಗೆ ಕಳಿಸಿಕೊಡಲಾಯಿತು.

Leave a Reply

You May Have Missed

error: Content is protected !!