ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದೆ.

ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರು ಡಿಸೇಲ್ ಪೈಪ್ ಲೈನ್ ನಲ್ಲಿ ರಂದ್ರ ಕೊರೆದು 2.5 ಇಂಚು ಹೆಚ್ ಡಿಪಿಇ ಪೈಪ್ ಮೂಲಕ ಅಂದಾಜು 12,000 ಲೀ. ಡಿಸೇಲ್ ನ್ನು ಕಳವು ಮಾಡಿದ್ದಾರೆ. ಕಳವಾದ ಡಿಸೇಲ್ ನ ಮೌಲ್ಯ ರೂ 9,60,000 ಎಂದು ಪರಿಗಣಿಸಲಾಗಿದೆ.
ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Leave a Reply

You May Have Missed

error: Content is protected !!