ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಕೊಕ್ಕಡ ದಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆಗೆ ಆಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲು ಪಟ್ಟು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಬೈಕ್ ಸವಾರ ನಿಡ್ಲೆ ನಿವಾಸಿ ಗಿರೀಶ್ ಹಾಗೂ ನೆಲ್ಯಾಡಿ ಮಾದರಿಯ ನಿವಾಸಿ ಹೊನ್ನಪ್ಪ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಪಘಾತದಲ್ಲಿ ಎರಡು ವಾಹನಗಳು ಜಖಂ ಗೊಂಡಿದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!