ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ನಾಳೆ(ಎ.10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Exam Result) ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

Leave a Reply

You May Have Missed

error: Content is protected !!