ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

ಮಂಗಳೂರು: ದಂತ ವೈದ್ಯಕೀಯ ಪದವೀಧರೆ ಯುವತಿಯೋರ್ವರು ನಗರದ ಪಾಂಡೇಶ್ವರದ ಪಿಜಿಯಲ್ಲಿ ಮೃತಪಟ್ಟಿರುವುದು ಮಂಗಳವಾರ ಗಮನಕ್ಕೆ ಬಂದಿದೆ.

ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ ಸ್ವಾತಿ ಶೆಟ್ಟಿ (24) ಮೃತಪಟ್ಟವರು. ಬಿಡಿಎಸ್‌ ಪದವಿ ಪೂರೈಸಿದ್ದ ಸ್ವಾತಿ ಪಾಂಡೇಶ್ವರದ ಕ್ಲಿನಿಕ್‌ವೊಂದರಲ್ಲಿ ಮಂಗಳವಾರದಿಂದ ಕೆಲಸಕ್ಕೆ ಹಾಜರಾಗಬೇಕಿತ್ತು.

ಸೋಮವಾರ ತಾಯಿ ಜತೆಗೆ ಪಾಂಡೇಶ್ವರ ಕ್ಲಿನಿಕ್‌ಗೆ ಬಂದು ಕೆಲಸದ ಬಗ್ಗೆ ಮಾತನಾಡಿ, ಪಾಂಡೇಶ್ವರ ಪೊಲೀಸ್‌ ಠಾಣೆ ಹಿಂಭಾಗದ ಪಿಜಿಯಲ್ಲಿ ಸೋಮವಾರ ಸಂಜೆಯಿಂದ ಉಳಿದಿದ್ದರು. ರಾತ್ರಿ ತಾಯಿ ಜತೆಗೆ ಮೊಬೈಲ್‌ನಲ್ಲಿ ಮಾತನಾಡಿ ವಿಪರೀತ ತಲೆನೋವು ಎಂಬುದಾಗಿ ಹೇಳಿದ್ದರು ಎಂದು ತಿಳಿದುಬಂದಿದೆ.

Leave a Reply

You May Have Missed

error: Content is protected !!