ಲಾವತಡ್ಕ ಬಳಿ ಬೈಕ್- ಕಾರು ಡಿಕ್ಕಿ: ಬೈಕ್ ಸವಾರ ಪೊಲೀಸ್ ಸಿಬ್ಬಂದಿಗೆ ಗಾಯ

ಲಾವತಡ್ಕ ಬಳಿ ಬೈಕ್- ಕಾರು ಡಿಕ್ಕಿ: ಬೈಕ್ ಸವಾರ ಪೊಲೀಸ್ ಸಿಬ್ಬಂದಿಗೆ ಗಾಯ

ನೇಸರ 27 : : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ  ನಡೆದಿದೆ. ಬೈಕ್ ಸವಾರ ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿ ಯಾಗಿರುವ ಸಿದ್ದಪ್ಪ ಗಾಯಗೊಂಡಿದ್ದಾರೆ. ಇವರು ಮಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.ಗಾಯಾಳುವನ್ನು ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Previous post

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ) ಇದರ 2020 -21 ನೇ ಸಾಲಿನ ವಾರ್ಷಿಕ ಮಹಾಸಭೆ

Next post

ಶಿಶಿಲ ಗ್ರಾಮ ಪಂಚಾಯತ್ ವತಿಯಿಂದ ಹತ್ಯಡ್ಕ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರಕಾಶ್ ಹಾಗೂ ತಂಡದವರಿಗೆ ಸನ್ಮಾನ

Leave a Reply

You May Have Missed

error: Content is protected !!