ಜೀಪ್ ಢಿಕ್ಕಿ; ಬೈಕ್ ಸವಾರ ಮೃತ್ಯು

ಜೀಪ್ ಢಿಕ್ಕಿ; ಬೈಕ್ ಸವಾರ ಮೃತ್ಯು

ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!