ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬ್ಯೆಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ನಡೆದಿದೆ.

ಬಸ್ ಉಡುಪಿಯಿಂದ ಕರಾವಳಿ ಬೈಪಾಸ್ ಮಾರ್ಗವಾಗಿ ಸಂತೆಕಟ್ಟೆಯತ್ತ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದ ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು.

ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದುರ್ದೈವಿ ಬಾಗಲಕೋಟೆ ಮೂಲದವರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

You May Have Missed

error: Content is protected !!