ಸರಣಿ ಅಪಘಾತ; ಕಾರುಗಳು ಜಖಂ

ಸರಣಿ ಅಪಘಾತ; ಕಾರುಗಳು ಜಖಂ

ಸುಳ್ಯ: ರಸ್ತೆಯಲ್ಲಿ ಸತ್ತು ಬಿದ್ದಿದ್ದ ಬೆಕ್ಕನ್ನು ಕಂಡು ಬ್ರೇಕ್ ಹಾಕಿದ ಪರಿಣಾಮ ಎರಡು ಕಾರು ಜಖಂ ಗೊಂಡ ಘಟನೆ ಮೇ.2 ರಂದು ಸಂಜೆ ಪಡ್ಪಿನಂಗಡಿಯಲ್ಲಿ ಸಂಭವಿಸಿದೆ.

ಪಡ್ಪಿನಂಗಡಿ ಮುಖ್ಯ ರಸ್ತೆಯಲ್ಲಿ ನಿಂತಿಕಲ್ಲು ಕಡೆ ಹೋಗುತ್ತಿದ್ದ ಕಾರಿನ ಚಾಲಕ ರಸ್ತೆಯಲ್ಲಿ ಸತ್ತು ಬಿದ್ದಿದ್ದ ಬೆಕ್ಕನ್ನು ಕಂಡು ಅದನ್ನು ತಪ್ಪಿಸಲು ಬ್ರೇಕ್ ಹಾಕಿದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿಯಾಗಿ, ಬಳಿಕ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ಕಾರು ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು, ಎದುರಿನಿಂದ ಬಂದ ಕಾರಿನ ಒಂದು ಬದಿಗೆ ಹಾನಿಯಾಗಿದೆ. ಪಿಕಪ್ ವಾಹನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!