ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

ಕಾಂಗ್ರೆಸ್‌ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್‌ ನಿವಾಸಿ ಶಿವಕುಮಾರ್‌ (50) ಬೆಳಗಾವಿಯ ಖಾನಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಮೇ.10ರಂದು ಸಂಭವಿಸಿದೆ.

ಶಿವಕುಮಾರ್‌ ಅವರು ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ ತಾನು ಚಲಾಯಿಸುತ್ತಿದ್ದ ಬೈಕ್‌ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಹುದ್ದೆಯಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!