ಟವರ್ ಮೇಲೆ ಬಿದ್ದ ಮರ; ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ

ಟವರ್ ಮೇಲೆ ಬಿದ್ದ ಮರ; ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಾಯ

33ಕೆ ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಬೃಹತ್ ಗಾತ್ರದ ಮರ ವಿದ್ಯುತ್ ಟವರ್ ಮೇಲೆ ಉರುಳಿದೆ. ಈ ಸಂದರ್ಭ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಎಂಬವರು ಅದೇ ರಸ್ತೆಯಲ್ಲಿ ಇಂದುಬೆಟ್ಟು ಹೋಗುತ್ತಿದ್ದು ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಒಂದು ಗಂಟೆಗಿಂತ ಅಧಿಕಕಾಲ ಹಿಂದಬೆಟ್ಟು ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬ್ಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು. ಕಕ್ಕಿಂಜೆ ಸಬ್ ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂತು 33ಕೆವಿ ವಿದ್ಯುತ್ ಟವರ್ ಗೆ ಕೊಂಚ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ

Leave a Reply

You May Have Missed

error: Content is protected !!