ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತೋಡಿಗೆ ಬಿದ್ದ ಕಾರು; ಮಹಿಳೆಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ತೋಡಿಗೆ ಬಿದ್ದ ಕಾರು; ಮಹಿಳೆಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರೊಂದು ಹೆದ್ದಾರಿ ಬದಿಯ ತೋಡಿಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಮೇ 28ರಂದು ಸಂಜೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ನೀರಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯ ತೋಡಿಗೆ ಬಿದ್ದಿದೆ. ಕಾರಿನಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದ್ದು ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

ಇದೊಂದು ಅಪಾಯಕಾರಿ ತಿರುವು ಆಗಿದ್ದು ಇಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಲೇ ಇರುತ್ತವೆ.

Leave a Reply

You May Have Missed

error: Content is protected !!