ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಉಜಿರೆಯ ಕಾಲೇಜಿನ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ. ಎಸ್, ಉಜಿರೆ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಿಸಿಕೊಳ್ಳಲಾಗಿದೆ.

Leave a Reply

You May Have Missed

error: Content is protected !!