ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸ್ಪೋಟಕ ಭವಿಷ್ಯ ನುಡಿದಿದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ.

ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ಹೇಳುವ ಮೂಲಕ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದಾರೆ. ಕೆಲ ದಿನಗಳಿಂದ ಪೊಲೀಸರ ವಶದಲ್ಲಿರುವಂತ ಅವರನ್ನು ತೀವ್ರ ವಿಚಾರಣೆಗೂ ಒಳಪಡಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಕೋಠಿ ಮಠದ ಶ್ರೀಗಳು ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ. ಕರೆಯದೆ ಬರುವವನು ಕೋಪ, ಬರೆಯದೆ ಓದುವವನು ಕಣ್ಣು, ಬರಿಗಾಲಲ್ಲಿ ನಡೆಯುವವನು ಮನಸ್ಸು ಎಂದರು.

ಒಟ್ಟಾರೆಯಾಗಿ ನಟ ದರ್ಶನ್ ಹಾಗೂ ಉಮಾಪತಿ ಗೌಡ ಅವರ ನಡುವಿನ ಗಲಾಟೆಯ ಬಗ್ಗೆ ನಟ ದರ್ಶನ್ ಕೋಪ ಹಾಗೂ ಉಮಾಪತಿ ತಾಳ್ಮೆಯೇ ಕಾರಣ ಎಂಬುದಾಗಿ ಮಾರ್ಮಿಕವಾಗಿ ಕೋಡಿ ಶ್ರೀ ಹೇಳಿದ್ದಾರೆ. ಅಂದರೇ ನಟ ದರ್ಶನ್ ಕೋಪವೇ ರೇಣುಕಾಸ್ವಾಮಿ ಕೊಲೆಗೂ ಕಾರಣವಾಗಿರೋ ವಿಷಯವನ್ನು ಕೋಡಿಮಠ ಶ್ರೀಗಳು ಈ ರೀತಿ ಬಿಚ್ಚಿಟ್ಟಿದ್ದಾರೆ.

Leave a Reply

You May Have Missed

error: Content is protected !!