ನೆಲ್ಯಾಡಿ: ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸಾ ಶಿಬಿರ

ನೆಲ್ಯಾಡಿ: ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸಾ ಶಿಬಿರ

ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್ ಮಂಗಳೂರು, ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ಮಂಗಳೂರು ಹಾಗೂ ಪ್ರಾರ್ಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ ಇವರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಚಿಕಿತ್ಸಾ ಶಿಬಿರ ಜೂ.26ರಂದು ನೆಲ್ಯಾಡಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಹಿರಿಯ ನೇತ್ರತಜ್ಞರಾದ ಡಾ.ಬದರಿನಾಥ್ ತಲ್ವಾರ, ಸಾರ್ವಜನಿಕ ಜನಸಂಪರ್ಕ ಅಧಿಕಾರಿ ರಶೀದ್, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರಾ ಹಾಗೂ ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಮಾರು 104 ಮಂದಿ ಇದರ ಪ್ರಯೋಜನವನ್ನು ಪಡೆದುಕೊಂಡರು. 24 ಮಂದಿ ಉಚಿತ ಕಣ್ಣಿನ ಪೊರೆ ಚಿಕಿತ್ಸೆಗೆ ಆಯ್ಕೆಯಾದರು.

Leave a Reply

You May Have Missed

error: Content is protected !!