ಹೃದಯಾಘಾತದಿಂದ ಯುವತಿ ನಿಧನ; ಮುಗಿಲು ಮುಟ್ಟಿದ ಆಕ್ರಂದನ

ಹೃದಯಾಘಾತದಿಂದ ಯುವತಿ ನಿಧನ; ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಇತ್ತೀಚಿನ ದಿನಗಳಲ್ಲಿ ಕಿರಿಯ ವಯಸ್ಸಿನವರು ಹೃದಯಾಘಾತಕ್ಕೊಳಗಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ.

ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ(24) ಮೃತ ಯುವತಿ.

ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಯೋಗದಲ್ಲಿದ್ದ ಇವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ತೆರಳಲೆಂದು ಮನೆಯಲ್ಲಿ ತಯಾರಿ ನಡೆಸುತ್ತಿದ್ದರು. ಈ ಸಂದರ್ಭ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದು ಬಂದಿದೆ.

ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

You May Have Missed

error: Content is protected !!