ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

ಕೊಕ್ಕಡ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು. ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜರವರು ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಂಡು ಗರಿಷ್ಠ ರೂ. 25 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದರು.

ಕೂಡಲೇ ಸ್ಪಂದಿಸಿ ರೂ.5 ಲಕ್ಷ ಪರಿಹಾರ ಮೊತ್ತವನ್ನು ಘೋಷಿಸಿ ಮುಂದಿನ ಪರಿಹಾರಕ್ಕಾಗಿ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ನೀಡುವುದಾಗಿ ಭರವಸೆಯನ್ನು ನೀಡಿದರು.

ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

Leave a Reply

You May Have Missed

error: Content is protected !!