ಗುಂಡ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಆಲ್ಟೊ ಕಾರು ನಡುವೆ ಅಪಘಾತ

ಗುಂಡ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಆಲ್ಟೊ ಕಾರು ನಡುವೆ ಅಪಘಾತ

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಬಸ್ ಗೆ ಆಲ್ಟೊ ಕಾರು ಡಿಕ್ಕಿಯಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ಜು. 7ರಂದು ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಹರ್ಷ ಅವರು ಚಲಾಯಿಸಿಕೊಂಡು ಬರುತ್ತಿದ್ದ ಆಲ್ಟೊ ಕಾರು ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರು ಚಾಲಕ ಹರ್ಷ ಎಂಬವರು ತೀವ್ರವಾದ ಗಾಯಗೊಂಡು ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳಿರುವ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

You May Have Missed

error: Content is protected !!