ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ನೆಕ್ಕಿತ್ತಡ್ಕ ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ್ದು, ಮರಕ್ಕೆ ಢಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯೋರ್ವರು ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Leave a Reply

You May Have Missed

error: Content is protected !!