ಗುಂಡ್ಯದಲ್ಲಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಗುಂಡ್ಯದಲ್ಲಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ನೆಲ್ಯಾಡಿ : ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು- ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಮಂಗಳೂರಿನಲ್ಲಿ ಬೆಂಗಳೂರಿಗೆ ಕಡೆಗೆ ಬರುತ್ತಿದ್ದ ಲಾರಿಗೆ ಬೆಂಗಳೂರಿನಿಂದ ಗೇರುಕಟ್ಟೆಗೆ ಬರುತ್ತಿದ್ದ ಕಾರುಗಳ ಮಧ್ಯೆ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಹಾಗೂ ಮಗು ಸೇರಿ ಐದು ಜನ ಪ್ರಯಾಣಿಸುತ್ತಿದ್ದು ಈ ಪೈಕಿ ಹರೀಶ್ ಹಾಗೂ ಯೋಗೀಶ್ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿಗಳಾದ ಇವರು ಬೆಂಗಳೂರಿನಿಂದ ಕಾರು ಖರೀದಿಸಿ ಬರುತ್ತಿರುವ ಸಂದರ್ಭ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave a Reply

You May Have Missed

error: Content is protected !!