ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ರಸ್ತೆಬದಿಯ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್.ಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನಿಂದ ಆತೂರುವರೆಗಿನ ರಸ್ತೆಯ ಇಕ್ಕೆಲಗಳಲ್ಲಿ, ಪಾದಾಚಾರಿಗಳಿಗೆ ತೊಂದರೆಯಾಗುವಂತೆ ಬೆಳೆದು ನಿಂತಿದ್ದಂತಹ ಗಿಡಗಳನ್ನು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸುಮಾರು 50 ಜನ ವಿದ್ಯಾರ್ಥಿಗಳು ಸ್ವಚ್ಛ ಮಾಡಿದರು. ಆ ಮೂಲಕ ಪಾದಚಾರಿಗಳು ಸುಗಮವಾಗಿ ಸಾಗಲು ಅನುಕೂಲ ಮಾಡಿದರು. ಅದಲ್ಲದೆ ರಸ್ತೆಯಲ್ಲಿದ್ದಂತಹ ಅಪಾಯಕಾರಿ ಹೊಂಡಗಳನ್ನು ಮುಚ್ಚಿ ವಾಹನ ಸವಾರರಿಗೂ ಅನುಕೂಲ ಮಾಡಿದರು.

ಘಟಕದ ಯೋಜನಾಧಿಕಾರಿಗಳಾದ ಕೀರ್ತನ್, ಹಿರಿಯ ಉಪನ್ಯಾಸಕ ತಿಲಕಾಕ್ಷ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!