ಈಚರ್ ಲಾರಿ ಹಾಗೂ ಬಸ್ ನಡುವೆ ಡಿಕ್ಕಿ

ಈಚರ್ ಲಾರಿ ಹಾಗೂ ಬಸ್ ನಡುವೆ ಡಿಕ್ಕಿ

ನೆಲ್ಯಾಡಿ: ಈಚರ್ ಲಾರಿ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಸಣ್ಣ ಪುಟ್ಟ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ಕನಕಪುರದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಈಚರ್ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಲಾರಿ ಚಾಲಕ ಸಣ್ಣಪುಟ್ಟ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave a Reply

You May Have Missed

error: Content is protected !!