ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

ಲಾರಿ ಮೇಲೆ ಬಿದ್ದ ವಿದ್ಯುತ್‌ ಕಂಬ

ಬೆಳ್ತಂಗಡಿ: ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24ರಂದು ಬೆಳಗ್ಗೆ ಮದಡ್ಕ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ಎರಡು ವಿದ್ಯುತ್‌ ಕಂಬ ಏಕಾಏಕಿ ಬಿದ್ದಿದೆ. ಕಂಬ ಬೀಳುವ ವೇಳೆ ಎರಡು ಬೈಕ್‌ ಸವಾರರು ಲಾರಿಯ ಎದುರು ಸ್ಕಿಡ್‌ ಅಗಿ ರಸ್ತೆಗೆ ಬಿದ್ದಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಸವಾರರಿಗೆ ಯಾವುದೇ ಗಾಯವಾಗಿಲ್ಲ.

ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಲಾರಿ ಚಾಲಕ ಅದೃಷ್ಟವಶಾತ್‌ ಪಾರಾಗಿದ್ದಾರೆ.

Leave a Reply

You May Have Missed

error: Content is protected !!