ದೇವಸ್ಥಾನಕ್ಕೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು

ದೇವಸ್ಥಾನಕ್ಕೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು

ಬಾಗಿಲು ಮುರಿದು ದೇವಸ್ಥಾನವೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ.

ಮೂಡುನಡುಗೋಡು ಗ್ರಾಮದ ಕರಿಂಕ ಎಂಬಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಸುಮಾರು 2.5 ಪವನ್ ತೂಕದ 1.40.000 ಸಾವಿರ ಮೌಲ್ಯದ ಚಿನ್ನದ ಕರಿಮಣಿ ಮತ್ತು ದೇವಸ್ಥಾನದ ಒಳಾಂಗಣದಲ್ಲಿದ್ದ ಕಾಣಿಕೆ ಡಬ್ಬಿಯಿಂದ ಅಂದಾಜು ರೂ.2000 ಹಣವನ್ನು ಕಳವು ಮಾಡಿದ ಬಗ್ಗೆ ಠಾಣೆಗೆ ದೂರು ನೀಡಲಾಗಿದೆ. ಒಟ್ಟು 1.42,000 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿದೆ.

ದೇವಸ್ಥಾನದ ಹಿಂಬಾಗಿಲು ತೆರದು ಗರ್ಭಗುಡಿಗೆ ನುಗ್ಗಿದ ಕಳ್ಳರು ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಗೆ ಧರಿಸಿದ್ದ ಚಿನ್ನದ ಕರಿಮಣಿ ಸರ ಹಾಗೂ ಡಬ್ಬಿಯಲ್ಲಿದ್ದ ಹಣವನ್ನು ಕಳವು ಮಾಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಎಸ್.ಐ.ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

You May Have Missed

error: Content is protected !!