ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮ ನಡೆಯಿತು.

ನಿವೃತ್ತ ಯೋಧ ಜಗನ್ನಾಥ ಶೆಟ್ಟಿ ಅವರನ್ನು ಕಾಲೇಜಿನ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅವರು ದೇಶ ಭಕ್ತಿಯ ಸಂದೇಶದೊಂದಿಗೆ ಕಾರ್ಗಿಲ್ ಯುದ್ಧದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಯಮುನಾ ತಂಡದ ಸ್ವಯಂ ಸೇವಕರು ರಚಿಸಿದ ಕಾರ್ಗಿಲ್ ವಿಜಯ ದಿನದ ಮಹತ್ವ ಸಾರುವ ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಾಕುಮಾರಿ, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ಯಾಮಿಲಾ ಹಾಗೂ ಇತಿಹಾಸ ಉಪನ್ಯಾಸಕಿ ಡಾ.ಸಾಜಿದಾ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!