ಪಟ್ರಮೆ: ಗುಡ್ಡ ಜರಿದು ಮನೆಯ ಹಿಂಭಾಗ ಸಂಪೂರ್ಣ ಹಾನಿ; ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ

ಪಟ್ರಮೆ: ಗುಡ್ಡ ಜರಿದು ಮನೆಯ ಹಿಂಭಾಗ ಸಂಪೂರ್ಣ ಹಾನಿ; ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ

ಕೊಕ್ಕಡ: ಭಾರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ ಎಂಬಲ್ಲಿ ಗುಡ್ಡ ಜರಿದು ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ ನೀಡಲಾಯಿತು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ, ಕೊಕ್ಕಡ ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ನಿಕಟ ಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!