ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಆತ್ಮಹತ್ಯೆ

ಎಸ್.ಎಸ್.ಎಲ್.ಸಿ.‌ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.

ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.

ಅ.7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವುದು ಗೊತ್ತಾಗಿದೆ.

ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!