ಬರ್ಚಿನಹಳ್ಳ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್ ಲಾರಿ

ಬರ್ಚಿನಹಳ್ಳ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್ ಲಾರಿ

ನೆಲ್ಯಾಡಿ: ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ನಿಂತಿದ್ದ ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜು ಆಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಧರ್ಮಸ್ಥಳದಿಂದ ದಾವಣಗೆರೆಗೆ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದು. ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಕಾರನ್ನು ನಿಲ್ಲಿಸಿ ಕಾರಿನಲ್ಲಿ ಇದ್ದವರೆಲ್ಲರೂ ಕೆಳಗೆ ಇಳಿದು ಸಮೀಪದಲ್ಲಿದ್ದ ಸಂದರ್ಭ ಮಂಗಳೂರಿಗೆ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಕಾರಿನ ಮೇಲೆ ಮಗುಚಿ ಬಿದ್ದಿದ್ದು. ಅದೃಷ್ಟವಶಾತ್ ಕಾರಿನಲ್ಲಿ ಯಾರು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ.

ಗುಂಡ್ಯದ ಪರಶುರಾಮ ಕ್ರೈನ್ ಮೂಲಕ ಕಾರನ್ನು ಹೊರತೆಗೆಯಲಾಯಿತು. ಸ್ಥಳಕ್ಕೆ ಸಂಚಾರಿ ಪೊಲೀಸರು ಹಾಗೂ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave a Reply

You May Have Missed

error: Content is protected !!