ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ನೂಜಿಬಾಳ್ತಿಲ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ಆ.8ರಂದು ರೆಡ್ ಕ್ರಾಸ್ ಘಟಕದ ಉದ್ಘಾಟನೆ ನಡೆಸಲಾಯಿತು.

ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕ ಫಾದರ್ ವಿಜೋಯ್ ವರ್ಗೀಸ್ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿ ಡಾ.ಅನುರಾಧ ಕುರುಂಜಿ, ಸಹಾಯಕ ಪ್ರಾಧ್ಯಾಪಕರು, ಎನ್ಎಂಸಿ ಸುಳ್ಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಅವರು ರೆಡ್ ಕ್ರಾಸ್ ಸಂಸ್ಥೆಯ ಮಹತ್ವದ ಕುರಿತು ಹಾಗೂ ಅದರಲ್ಲಿ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಅಗತ್ಯತೆಯ ಕುರಿತು ಅರಿವು ಮೂಡಿಸಿದರು.

ಸಂಸ್ಥೆಯ ಪ್ರಾಂಶುಪಾಲ ಜಾರ್ಜ್.ಟಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಗುರು ತೋಮಸ್.ಎ.ಕೆ. ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ಸಂಸ್ಥೆಯ ರೆಡ್ ಕ್ರಾಸ್ ಕೌನ್ಸಿಲರ್ ಶಾಂಭವಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಯಾಮಿನಿ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ವಾಚಿಸಿದರು. ಕುಮಾರಿ ವೀಕ್ಷಾ ನಿರೂಪಿಸಿದರು. ಸಚಿನ್ ಸ್ವಾಗತಿಸಿದರು, ಮನ್ಸೂರ ವಂದಿಸಿದರು.

Leave a Reply

You May Have Missed

error: Content is protected !!