ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರು ಕೌಕ್ರಾಡಿ ಪಂಚಾಯಿತಿಗೆ ಬೇಟಿ

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರು ಕೌಕ್ರಾಡಿ ಪಂಚಾಯಿತಿಗೆ ಬೇಟಿ

ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರು ಅ.13ರಂದು ಕೌಕ್ರಾಡಿ ಗ್ರಾಮ ಪಂಚಾಯಿತಿನ ಅಭಿವೃದ್ಧಿ ಅಧಿಕಾರಿ ಯಶವಂತ ಬೆಲ್ಚಡ ಅವರನ್ನು ಸಂದರ್ಶಿಸಿ ಪಂಚಾಯಿತಿನ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕಾಲೇಜಿನ ಸಂಚಾಲಕ ರೆ.ಫಾ.ನೋಮಿಸ್ ಕುರಿಯಾಕೋಸ್ ಮತ್ತು ಪ್ರಾಂಶುಪಾಲ ಏಲಿಯಾಸ್.ಎಂ.ಕೆ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೌಕ್ರಾಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಶವಂತ ಬೆಲ್ಚಡ ಅವರು, ವಿದ್ಯಾರ್ಥಿಗಳು ಯಶಸ್ಸಿನ ಗುರಿಯನ್ನು ಮುಟ್ಟಬೇಕಾದರೆ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು. ಪಂಚಾಯಿತಿನ ಕೆಲಸ ಕಾರ್ಯಗಳನ್ನು ವಿವರಿಸಿದ ಅವರು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಆದ ಅನುಭವ ಹಾಗೂ ಘಟನೆಗಳ ಬಗ್ಗೆ, ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಅನುಭವವನ್ನು ಎನ್ಎಸ್ಎಸ್ ಸ್ವಯಂಸೇವಕರೊಡನೆ ಹಂಚಿಕೊಂಡರು.

ಕೌಕ್ರಾಡಿ ಗ್ರಾಮ ಪಂಚಾಯತಿನ ಅಧ್ಯಕ್ಷ ಲೋಕೇಶ್ ಬಾಣಜಾಲು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ.ಶೆಟ್ಟಿ.ಕೆ ಸ್ವಾಗತಿಸಿದರು, ಸಹಕಾರ್ಯಕ್ರಮ ಅಧಿಕಾರಿ ಮಧು.ಎ.ಜೆ ವಂದಿಸಿದರು. ಎನ್ಎಸ್ಎಸ್ ಘಟಕ ನಾಯಕ ದೀಕ್ಷಿತ, ಆಶ್ಲೇಷ ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Leave a Reply

You May Have Missed

error: Content is protected !!