ನೆಲ್ಯಾಡಿ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ನೆಲ್ಯಾಡಿ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ನೆಲ್ಯಾಡಿ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ನಿವೃತ್ತ ಸೈನಿಕ ಚಾಕೋಚ ಅವರು ಧ್ವಜಾರೋಹಣ ಮಾಡಿ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು.

ವೇದಿಕೆಯಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಬಾಣಜಾಲು, ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ- ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಚಾಕೋಚ ಅವರನ್ನು ಸನ್ಮಾನಿಸಲಾಯಿತು. ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷ ರವಿಪ್ರಸಾದ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಆಟೋ ಚಾಲಕ ಮಾಲಕ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!