ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ನಿವೃತ್ತ ಯೋಧ ಲೆಫ್ಟಿನೆಂಟ್ ಕರ್ನಲ್ ಮಥಾಯಿ ಅವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ನಿವೃತ್ತ ಯೋಧ ಸೆಬಾಸ್ಕಿನ್.ಕೆ.ಕೆ ಅವರು ಯೋಧರ ಸೇವೆಯ ಬಗೆಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಡಿಸಿಕೊಳ್ಳಬೇಕು ಶಿಸ್ತು ಒಬ್ಬ ಉತ್ತಮ ನಾಗರೀಕನನ್ನಾಗಿ ಮಾಡಲು ಸಹಕಾರಿಯಾಗಿದೆ ಎಂದು ಹೇಳಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಗಳು ಶಾಲೆಯಲ್ಲಿ ಹಮ್ಮಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ನಡೆಯುವ ಕಾರ್ಯಕ್ರಮಗಳು ಮಾದರಿಯಾಗಬೇಕು ಎಂದು ಹೇಳಿ ಶುಭ ಹಾರೈಸಿದರು.

ಸಂಸ್ಥೆಯ ಮುಖ್ಯಸ್ಥ ಜಾರ್ಜ್.ಕೆ ಥಾಮಸ್ ಅವರು ಸ್ವಾಗತಿಸಿದರು. ಧನ್ವಿ ಮತ್ತು ಅನ್ಸಲಿನ ಕಾರ್ಯಕ್ರಮ ನಿರೂಪಿಸಿದರು. ಶಾಲಾ ನಾಯಕಿ ಏಂಜಲ್ ವಂದಿಸಿದರು. ವಿದ್ಯಾರ್ಥಿಗಳ ಮನೋರಂಜನ ಕಾರ್ಯಕ್ರಮ ನೆರವೇರಿತ್ತು.

ವೇದಿಕೆಯಲ್ಲಿ ಉಪಪ್ರಾಚಾರ್ಯರಾದ ಜೋಸ್.ಎಂ.ಜೆ, ಐ ಟಿ ಐ ನ ಪ್ರಾಚಾರ್ಯ ಸಜಿ ತೋಮಸ್ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!