ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಪ್ರೋತ್ಸಾಹಕ ಪ್ರಶಸ್ತಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ: 2023-24ನೇ ಸಾಲಿನಲ್ಲಿ ಶೇ.99.68 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ರಾವ್ ಅವರಿಗೆ ಸ್ಮರಣಿಕೆ, ಸನ್ಮಾನ ಪತ್ರ ಪ್ರೋತ್ಸಾಹಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಂಘವು ಸತತವಾಗಿ 4ನೇ ಬಾರಿ ಪಡೆಯುವ ಪ್ರಶಸ್ತಿಯಾಗಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ದೇಶಕ ಕುಶಾಲಪ್ಪ ಗೌಡ ಹಾಗೂ ಇತರ ನಿರ್ದೇಶಕರು ಹಾಗೂ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿಗಳಾದ ಕೃಷ್ಣಪ್ಪ ಗೌಡ, ರಂಜಿತ್ ಶೆಟ್ಟಿ, ಯೋಗೀಶ್ ಪಿ, ಹಾಗೂ ಸಂಘದ ನಿವೃತ್ತ ಸಿಇಒ ತ್ಯಾಂಪಣ್ಣ ಶೆಟ್ಟಿಗಾರ್ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!