ಮುಂಡೂರುಪಳಿಕೆ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಮುಂಡೂರುಪಳಿಕೆ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲಾ ಎಸ್ .ಡಿ.ಎಂ.ಸಿ ಅಧ್ಯಕ್ಷ ಜಾರಪ್ಪ ಗೌಡ ಕುಂಡಡ್ಕ ಅವರು ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಅವರು ಗಣ್ಯರನ್ನು ಸ್ವಾಗತಿಸಿದರು.

ಈ ಸಂಧರ್ಭದಲ್ಲಿ ಶಾಲಾ ವಿಧ್ಯಾರ್ಥಿಗಳು ಹಾಗೂ ತಾಯಂದಿರ ಸಮಿತಿಯ ಅಧ್ಯಕ್ಷೆ ಅಶ್ವಿನಿ, ಅಂಗನವಾಡಿ ಶಿಕ್ಷಕಿ ಗೀತಾ, ಸಹಾಯಕಿ ಕಮಲ ಅಂಗನವಾಡಿ, ಪುಟಾಣಿಗಳು ಎಸ್ .ಡಿ.ಎಂ.ಸಿ ಮಾಜಿ ಅಧ್ಯಕ್ಷ ವಿಠಲ ಗೌಡ ತೆಂಕುಬೈಲು ಮತ್ತು ಬಾಬು ಪಿತ್ತಿಲಕೋಡಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಶಿಕುಮಾರ್ ಜೇಡರಪೇಟೆ, ಶಾಲಾ ಶಿಕ್ಷಕಿ ಸುಶೀಲ, ನಿವೃತ್ತ ಯೋಧ ಕ್ಯಾಪ್ಟನ್ ನಾಗೇಶ್ ಕುರ್ಲಾಜೆ, ಶಾಲಾ ವಿಧ್ಯಾರ್ಥಿಗಳ, ಪೋಷಕ ವೃಂದ, ಹಳೆ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು..

Leave a Reply

You May Have Missed

error: Content is protected !!