ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನ ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆ.20ರ ಮಂಗಳವಾರ ನಡೆದಿದೆ.

ನಿವೃತ್ತ ಶಿಕ್ಷಕ ಎಸ್.ಪಿ.ಬಾಲಕೃಷ್ಣ ಭಟ್(73) ಕೊಲೆಯಾದ ವ್ಯಕ್ತಿ. ಮಂಗಳವಾರ ಮಧ್ಯಾಹ್ನದ ಬಳಿಕ ಈ ಘಟನೆ ಸಂಭವಿಸಿದ್ದು, ಕೊಲೆಗಾರರು ಯಾರು, ಕೊಲೆಗೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Leave a Reply

You May Have Missed

error: Content is protected !!