ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕ ಮೃತ್ಯು

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕ ಮೃತ್ಯು

ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಗಂಭೀರ ಗಾಯಗೊಂಡ ಕಾರು ಚಾಲಕ ಇದೀಗ ಮೃತಪಟ್ಟಿದ್ದಾರೆ.

ವಿರಾಜಪೇಟೆಯ ಗಣೇಶ್(64) ಮೃತಪಟ್ಟವರು. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಗಣೇಶ್ ಅವರಿಗೆ ಎದೆಗೆ ಗಂಭೀರ ಗಾಯಗಳಾಯಿತು. ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮಗಳು, ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

You May Have Missed

error: Content is protected !!