ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ.

ರಮೇಶ್(40) ಮೃತ ವ್ಯಕ್ತಿ. ರಮೇಶ್ ಅವರು ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ರಮೇಶ್ ಅವರ ಮನೆಯ ಆರ್ಥಿಕ ಸ್ಥಿತಿಗತಿ ಸರಿ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

You May Have Missed

error: Content is protected !!