ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

ಕಡಬ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸೈಂಟ್ ಜೋಕಿಮ್ಸ್ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಕಡಬ ಇದರ ಸಹಯೋಗದಲ್ಲಿ ನೆರವೇರಿತು.

ಕಡಬ ಭೂಮಿಕಾ ಕನ್ಸಲ್ಟೆನ್ಸಿನ ಉದ್ಯಮಿ ಸತೀಶ್ ನಾಯ್ಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ ಇಲಾಖೆಯ ಆಶಯದಂತೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಸ್ಪರ್ಧಾ ಮನೋಭಾವದಿಂದ ಪಂದ್ಯಾಟದಲ್ಲಿ ಪಾಲ್ಗೊಳ್ಳುತ್ತಿರುವ ಸ್ಪರ್ಧಾಳುಗಳಿಗೆ ಅವರು ಶುಭ ಹಾರೈಸಿದರು.

ಕಡಬ ತಾಲೂಕು ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿ ಲೋಕೇಶ್ ಟಿ.ಎಸ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪಂದ್ಯಾಟ ಆಯೋಜಕರಿಗೆ ಅಭಿನಂದಿಸಿ, ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ.ಪ್ರಕಾಶ್ ಪಾವ್ಲ್ ಡಿಸೋಜ ಅಧ್ಯಕ್ಷತೆ ವಹಿಸಿ ಪಂದ್ಯಾಟಕ್ಕೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಕಡಬ ತಾಲೂಕು ಪ್ರಾಥಮಿಕ ಶಾಲಾ ವಿಭಾಗದ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿ ಚಂದ್ರಶೇಖರ್, ಕಡಬ ಕ್ಲಸ್ಟರ್ ಸಮೂಹ ಸಂಪನ್ಮೂಲ ಅಧಿಕಾರಿ ಗಣೇಶ್ ನಡುವಾಳ್, ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್, ಕಾರ್ಯದರ್ಶಿ ಜೆಸಿಂತಾ ವೇಗಸ್, ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಕಿರಣ್ ಕುಮಾರ್, ದಕ್ಷಾ ಪ್ರಸಾದ್, ರಕ್ಷಕ -ಶಿಕ್ಷಕ ಸಮಿತಿಯ ಉಪಾಧ್ಯಕ್ಷರುಗಳಾದ ವಾಚಣ್ಣ ಕೆರೆಮೂಲೆ ಹಾಗೂಈಶ್ವರ ಉಪಸ್ಥಿತರಿದ್ದರು.

ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಲತಾ ಸ್ವಾಗತಿಸಿದರು, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ವಂದಿಸಿದರು. ಶಿಕ್ಷಕಿ ಪೂರ್ಣಿಮಾ.ಪಿ ಕಾರ್ಯಕ್ರಮ ನಿರೂಪಿಸಿದರು.

Leave a Reply

You May Have Missed

error: Content is protected !!