ಸವಣಾಲು ಬಳಿ ಬೋನಿಗೆ ಬಿದ್ದ ಚಿರತೆ

ಸವಣಾಲು ಬಳಿ ಬೋನಿಗೆ ಬಿದ್ದ ಚಿರತೆ

ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು.

ಕಳೆದ ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೆರೆಯಾಗಿದ್ದು ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Leave a Reply

You May Have Missed

error: Content is protected !!