ದಕ್ಷಿಣ ಕನ್ನಡ ಸೇರಿ 10 ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರವೂ (ಸೆ.05) ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ.ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ತುಂತುರು ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.























Leave a Reply