ಗುಂಡ್ಯ: ಕೆಎಸ್‌ಆರ್‌ಟಿಸಿ ರಾಜಹಂಸ-ಟ್ಯಾಂಕರ್ ಡಿಕ್ಕಿ

ಗುಂಡ್ಯ: ಕೆಎಸ್‌ಆರ್‌ಟಿಸಿ ರಾಜಹಂಸ-ಟ್ಯಾಂಕರ್ ಡಿಕ್ಕಿ

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಗಡಿದೇವಸ್ಥಾನದ ಸಮೀಪ ಸೆ.10ರಂದು ಸಂಜೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ರಾಜಹಂಸ ಬಸ್ಸು ಹಾಗೂ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಿನಿ ಟ್ಯಾಂಕರ್ ನಡುವೆ ಗುಂಡ್ಯ ಗಡಿದೇವಸ್ಥಾನದ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು ಚಾಲಕರು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.

Leave a Reply

You May Have Missed

error: Content is protected !!